ಜನ ಔಷಧಿ ಸಪ್ತಾಹ : ಮಡಿಕೇರಿಯಲ್ಲಿ ಜನ ಜಾಗೃತಿ ಜಾಥ

March 6, 2021

ಮಡಿಕೇರಿ ಮಾ.6 : ಜನ ಔಷಧಿ ಯೋಜನೆಯನ್ನು ಜನಪ್ರಿಯಗೊಳಿಸಲು ಮತ್ತು ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು.
ಜನ ಔಷಧಿ ಕೇಂದ್ರಗಳ ಮಾಲೀಕರುಗಳ ಒಕ್ಕೂಟ ಹಾಗೂ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಜಾಗೃತಿ ಜಾಥಾ ನಡೆಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ನಗರಾಧ್ಯಕ್ಷ ಮನು ಮಂಜುನಾಥ್ ಮತ್ತಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

error: Content is protected !!