ಮೂರ್ನಾಡಿನಲ್ಲಿ “ಜೈ ಭೀಮ್ ಕಪ್” ಕ್ರಿಕೆಟ್ ಪಂದ್ಯಾವಳಿ : ಮಾ.26 ರಿಂದ ಆರಂಭ

March 6, 2021

ಮಡಿಕೇರಿ ಮಾ.6 : ಹುಲಿತಾಳದ ಡಾ.ಭೀಮರಾವ್ ಅಂಬೇಡ್ಕರ್ ಕ್ರೀಡಾ ಸಮಿತಿ ಮತ್ತು ದಲಿತ ನಾಗಾಸ್ ಕ್ರೀಡಾ ಅಕಾಡೆಮಿ ವತಿಯಿಂದ ಮಾ.26 ರಿಂದ 28ರ ವರೆಗೆ 19ನೇ ವರ್ಷದ “ಜೈ ಭೀಮ್ ಕಪ್” ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷಯ ಹೆಚ್.ಟಿ.ಹರೀಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಮಾ.26 ರಿಂದ ಮೂರ್ನಾಡು ವಿದ್ಯಾಸಂಸ್ಥೆಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದರು.
ವಿಜೇತ ತಂಡಕ್ಕೆ ರೂ.33,333 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ 22,222 ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಆಸಕ್ತರು 97312 66650 ಸಂಖ್ಯೆಗೆ ರೂ.2 ಸಾವಿರ ಪ್ರವೇಶ ಶುಲ್ಕವನ್ನು ಗೂಗಲ್ ಪೇ ಮೂಲಕ ಹಣ ಪಾವತಿಸಿ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ತಂಡದ ಹೆಸರು ನೋಂದಾಯಿಸಿಕೊಳ್ಳಲು ಮಾ.15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ 74837 06217, 97312 66650 ಸಂಪರ್ಕಿಸುವಂತೆ ತಿಳಿಸಿದರು.
ಪುರುಷರಿಗೆ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರ ಮತ್ತು ಪರುಷರ ಪ್ರತ್ಯೇಕ ವಿಭಾಗದಲ್ಲಿ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ. ಸಮಾರೋಪ ಸಮಾರಂಭದಂದು ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷ ಹೆಚ್.ಎನ್.ವಿನೋದ್, ಕಾರ್ಯದರ್ಶಿ ಜಗದೀಶ್, ಸದಸ್ಯರುಗಳಾದ ಹೆಚ್.ಜಿ.ಸೂರ್ಯ, ಹೆಚ್.ಸಿ.ನಂದಕುಮಾರ್ ಹಾಗೂ ಹೆಚ್.ಎನ್.ರೋಹಿತ್ ಉಪಸ್ಥಿತರಿದ್ದರು.

error: Content is protected !!