ಲಕ್ಷ್ಮೀನಾರಾಯಣ ಭಟ್ ನಿಧನಕ್ಕೆ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಸಂತಾಪ

March 6, 2021

ಮಡಿಕೇರಿ ಮಾ.6 : ಕನ್ನಡ ಸಾರಸ್ವತ ಲೋಕಕ್ಕೆ ದೊಡ್ಡ ಕೊಡುಗೆ ನೀಡಿರುವ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮೀನಾರಾಯಣ ಭಟ್ಟರು ಶನಿವಾರ ಮುಂಜಾನೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಸಾಹಿತ್ಯ ಲೋಕದಲ್ಲಿ ‘ಎನ್‍ಎಸ್‍ಎಲ್’ ಎಂದೇ ಖ್ಯಾತರಾಗಿದ್ದ ಲಕ್ಷ್ಮೀನಾರಾಯಣ ಭಟ್ಟರು ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸಾಕಷ್ಟು ಸಾಹಿತ್ಯ ಕೃಷಿ ಮಾಡಿದವರಾಗಿದ್ದಾರೆ.
ಷೇಕ್ಸ್‌ಪಿಯರ್, ಎಲಿಯಟ್ಸ್ ಮುಂತಾದ ಇಂಗ್ಲಿಷ್ ಸಾಹಿತಿಗಳ ಕಾವ್ಯಗಳನ್ನು ಕನ್ನಡಕ್ಕೆ ಅನುವಾದಿಸಿರುವ ಲಕ್ಷ್ಮೀನಾರಾಯಣ ಭಟರಿಗೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.
ಎನ್‍ಎಸ್‍ಎಲ್ ಅವರ ಅಗಲಿಕೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆಯೆಂದು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಕಾರ್ಯದರ್ಶಿ ವಿಲ್ಫ್ರೆಡ್ ಕ್ರಾಸ್ತ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್, ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್. ಮನು ಶೆಣೈ ಸಂತಾಪ ವ್ಯಕ್ತಪಡಿಸಿದ್ದಾರೆ.

error: Content is protected !!