ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

March 6, 2021

ಮಡಿಕೇರಿ ಮಾ.6 : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ” ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಮತ್ತು ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್, 20 ಕೊನೆಯ ದಿನವಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‍ಸೈಟ್ ವಿಳಾಸ: ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಸಲ್ಲಿಸಬಹುದು.
ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್‍ಸೈಟ್ www.ssp.postmatric.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 8050770005/ 8050770004 ಇಮೇಲ್: www.bcw.karnataka.gov.in ದೂರವಾಣಿ ಸಂಖ್ಯೆ:080-35254757 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!