ಮಾ.8 ರಂದು ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಮಡಿಕೇರಿ ಮಾ.06 : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ ಮತ್ತು ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಗೆ ವಕೀಲರ ಸಂಘದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಜಿನರಾಳಕರ ಭೀಮರಾವ್ ಲಗಮಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪಿ.ಎಸ್.ಚಂದ್ರಶೇಖರ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ವಿಜಯ ಕುಮಾರ್, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಬಿ.ಕೆ.ಮನು, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಸ್ಮಿತಾ, ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್.ಕವನ್, ಸರ್ಕಾರಿ ಅಭಿಯೋಜಕರಾದ ಕೆ.ಜಿ.ಅಶ್ವಿನಿ, ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಸಂಘದ ಅಧ್ಯಕ್ಷರಾದ ಬಿ.ಕೆ.ರೋಹಿಣಿ ಇತರರು ಪಾಲ್ಗೊಳ್ಳಲಿದ್ದಾರೆ.
