ಮಾ.8 ರಿಂದ ಚಂದನ ವಾಹಿನಿಯಲ್ಲಿ ವಿವಿಧ ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮ

March 6, 2021

ಮಡಿಕೇರಿ ಮಾ.6 : ಸಮಾಜ ಕಲ್ಯಾಣ ಇಲಾಖೆ ಹಾಗೂ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗೆ ಅನುಷ್ಟಾನಗೊಳಿಸುತ್ತಿರುವ ಕಾರ್ಯಕ್ರಮಗಳು ಹಾಗೂ ವಿವಿಧ ಇಲಾಖೆಗಳಲ್ಲಿ ಅನುಷ್ಟಾನಗೊಳಿಸುತ್ತಿರುವ ಎಸ್‍ಸಿ.ಎಸ್‍ಪಿ, ಟಿಎಸ್‍ಪಿ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗ ಅರಿವು ಮೂಡಿಸುವ ಪ್ರಾಯೋಜಿತ ಕಾರ್ಯಕ್ರಮವನ್ನು ಚಂದನ ವಾಹಿನಿಯಲ್ಲಿ ಮಾರ್ಚ್, 08 ರಿಂದ ಬೆಳಗ್ಗೆ 7.30 ರಿಂದ 8.30 ರವರೆಗೆ ಪ್ರತಿ ಸೋಮವಾರದಿಂದ ಗುರುವಾರದವರೆಗೆ ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ನಡೆಸಿಕೊಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!