ಮಾ.11 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆ

March 8, 2021

ಮಡಿಕೇರಿ ಮಾ.08 : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ಸಂಪ್ರದಾಯದಂತೆ ಮಹಾಶಿವರಾತ್ರಿ ಯನ್ನು ನಡೆಸಿಕೊಂಡು ಬರುತ್ತಿದ್ದು, ಈ ವರ್ಷವೂ ಮಾರ್ಚ್, 11 ರಂದು ಮಹಾಶಿವರಾತ್ರಿಯಂದು ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆ 7 ಗಂಟೆಗೆ ಶತರುದ್ರಾಭೀಷೇಕ, ಬೆಳಗ್ಗೆ 9.30 ಗಂಟೆಗೆ ಮಹಾ ರುದ್ರಹೋಮ, 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಂಜೆ 6 ಗಂಟೆಗೆ ತಾಯಂಬಕ ಸೇವೆ, ಸಂಜೆ 6.30 ಕ್ಕೆ ಗಂಟೆಯಿಂದ ಏಕದಶ ರುದ್ರಾಭಿಷೇಕ, ಮಹಾ ಮಂಗಳಾರತಿ ದೇವರ ನೃತ್ಯ ಉತ್ಸವ ನಡೆಯಲಿದೆ.
ಶ್ರೀ ತಲಕಾವೇರಿ ದೇವಾಲಯದಲ್ಲ್ಲಿ ಬೆಳಗ್ಗೆ 9.30 ಗಂಟೆಗೆ ಶತರುದ್ರಾಭೀಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಂಜೆ 7 ಗಂಟೆಗೆ ಏಕದಶರುದ್ರಾಭಿಷೇಕ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.
ನಂತರ ರಾತ್ರಿ 11 ಗಂಟೆಗೆ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ, ಸರಪಾಡಿ ಬಂಟ್ವಾಳ ತಲ್ಲೂಕು ದ.ಕ ಪ್ರಸಂಗ ಇವರಿಂದ ಭಸ್ಮಾಸುರ ಮೋಹಿನಿ-ಶಬರಿಮಲೆ ಅಯ್ಯಪ್ಪ ಯಕ್ಷಗಾನ ನಡೆಸಿಕೊಡಲಿದ್ದಾರೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!