ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ

March 31, 2021

ಮಡಿಕೇರಿ ಮಾ.31 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 17 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ.
11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 6 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 13 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6390 ಆಗಿದ್ದು, 6229 ಮಂದಿ ಗುಣಮುಖರಾಗಿದ್ದಾರೆ. 78 ಸಕ್ರಿಯ ಪ್ರಕರಣಗಳಿದ್ದು, 83 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 66 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!