ಪೊಲೀಸ್ ನೇಮಕಾತಿ : ಅಂತಿಮ ಆಯ್ಕೆ ಪಟ್ಟಿ ಪ್ರಕಟ

March 31, 2021

ಮಡಿಕೇರಿ ಮಾ.31 : ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ 2019 ನೇ ಸಾಲಿನಲ್ಲಿ ಖಾಲಿ ಇದ್ದ ಸಿವಿಲ್, ಮಹಿಳಾ ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗೆ ಹಾಜರಾಗಿ 1:5 ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಈಗಾಗಲೇ ದೇಹದಾಢ್ರ್ಯತೆ ಮತ್ತು ಸಹಿಷ್ಟುತೆ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅರ್ಹಗೊಂಡ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಲು ಕೊಡಗು ಜಿಲ್ಲಾ ಪೊಲೀಸ್ ನೇಮಕಾತಿ ಸಮಿತಿ ಸದಸ್ಯರನ್ನೊಳಗೊಂಡ ಸಭೆಯು ನಡೆದಿದ್ದು, 2019 ನೇ ಸಾಲಿನ ಸಿವಿಲ್ ಪೊಲೀಸ್ ಕಾನ್ಸಟೇಬಲ್ -62 ಹುದ್ದೆಗಳು, ಮಹಿಳಾ ಪೊಲೀಸ್ ಕಾನ್ಸಟೇಬಲ್–16 ಹುದ್ದೆಗಳು ಮತ್ತು ಸಶಸ್ತ್ರ ಪೊಲೀಸ್ ಕಾನ್ಸಟೇಬಲ್-53 ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪೊಲೀಸ್ ನೇಮಕಾತಿ ಸಮಿತಿಯ ಅಧ್ಯಕ್ಷರು ಮತ್ತು ಪೊಲೀಸ್ ಅಧೀಕ್ಷಕರಾದ ಕ್ಷಮಾ ಮಿಶ್ರಾ ಅವರು ತಿಳಿಸಿದ್ದಾರೆ.

error: Content is protected !!