ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 123

April 8, 2021

ಮಡಿಕೇರಿ ಏ. 8 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 19 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ.
18 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 7 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 7 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6508 ಆಗಿದ್ದು, 6302 ಮಂದಿ ಗುಣಮುಖರಾಗಿದ್ದಾರೆ.
123 ಸಕ್ರಿಯ ಪ್ರಕರಣಗಳಿದ್ದು, 83 ಮರಣ ಪ್ರಕರಣಗಳು
ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 94 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!