ಸೋಮವಾರಪೇಟೆ ಒಕ್ಕಲಿಗರ ಸಂಘಕ್ಕೆ 50ರ ಸಂಭ್ರಮ : ಮೇ 27ರಂದು ಸುವರ್ಣ ಮಹೋತ್ಸವ

April 8, 2021

ಮಡಿಕೇರಿ ಏ. 8 : ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘಕ್ಕೆ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಮೇ 27ರಂದು ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಹೇಳಿದರು.
1968ರಲ್ಲಿ ದಿ. ಸಿ.ಕೆ. ಕಾಳಪ್ಪ ಅವರ ನೇತೃತ್ವದಲ್ಲಿ ಸಂಘವನ್ನು ಪ್ರಾರಂಭಿಸಲಾಯಿತು. ಜನಾಂಗದ ಹಿರಿಯರ ದುಡಿಮೆಯ ಫಲವಾಗಿ ಈಗ 10 ಕೋಟಿ ರೂಗಳಿಗೂ ಹೆಚ್ಚಿನ ಆಸ್ತಿಯನ್ನು ಸಂಘ ಹೊಂದಿದೆ ಎಂದು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂಘದ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಹೆಸರಿನಲ್ಲಿ ಎಲ್.ಕೆ.ಜಿ.ಯಿಂದ ಪದವಿ ಪೂರ್ವ ಕಾಲೇಜಿನ ವರೆಗೆ 850 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಮೇ.27ರಂದು ಸಂಘದ ಸಮುದಾಯಭವನದಲ್ಲಿ ಬೆಳಿಗ್ಗೆ 10-30ಕ್ಕೆ ನಡೆಯುವ ಸುವರ್ಣ ಮಹೋತ್ಸವ ಕಾರ್ಯಕ್ರಮ ಶ್ರೀ ಆದಿಚುಂಚನಾಗಿರಿ ಮಹಾಸಂಸ್ಥಾನದ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿಗಳು ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ.
ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸುವರ್ಣಮಹೋತ್ಸವ ಅಂಗವಾಗಿ 45 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಪ್ರವೇಶ ದ್ವಾರವನ್ನು ಸಂಸದರಾದ ಪ್ರತಾಪ್‍ಸಿಂಹ ಅವರು ಉದ್ಘಾಟಿಸಲಿದ್ದಾರೆ.
ಗೋಷ್ಠಿಯಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಕೆ.ಟಿ. ಪರಮೇಶ್, ಹಣಕಾಸು ಸಮಿತಿ ಅಧ್ಯಕ್ಷ ಜಿ.ಪಿ. ಲಿಂಗರಾಜು, ಮೆರವಣಿಗೆ ಸಮಿತಿ ಸಹಕಾರ್ಯದರ್ಶಿ ನಂದಕುಮಾರ್, ನಿರ್ದೇಶಕ ಎಸ್.ಜಿ. ಮೇದಪ್ಪ ಇದ್ದರು.

error: Content is protected !!