ಅರಸಿನಕುಪ್ಪೆ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚೌಡಕೀಯಮ್ಮ ದೇವಾಲಯದ ವಾರ್ಷಿಕೋತ್ಸವ

April 8, 2021

ಮಡಿಕೇರಿ ಏ. 8 : ಸೋಮವಾರಪೇಟೆ ತಾಲೂಕಿನ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸಿನಕುಪ್ಪೆ ಗ್ರಾಮದ ಶ್ರೀ ಚೌಡಕೀಯಮ್ಮ ದೇವಾಲಯದ ವಾರ್ಷಿಕ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.
ದೇವಾಲಯದ ಪ್ರಧಾನ ಗುರುಗಳಾದ ಶ್ರೀರಾಜೇಶ್‍ನಾಥ್‍ಜೀ ಅವರ ಮಾರ್ಗದರ್ಶನದಲ್ಲಿ ಶ್ರೀ ಮಂಜುನಾಥ ದೇವಾಲಯದಲ್ಲಿ ವಾರ್ಷಿಕೋತ್ಸವ ಪೂಜೋತ್ಸವ ನೆರವೇರಿತು. ಅರ್ಚಕ ಜಗದೀಶ್ ಉಡುಪ ಪೌರೋಹಿತ್ವದಲ್ಲಿ ಹೋಮ, ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ನಂತರ ಸಾರ್ವಜನಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ದೇವಾಲಯಕ್ಕೆ ಒಳಪಟ್ಟ ಶ್ರೀ ಚೌಡಕೀಯಮ್ಮ ಹಾಗು ಗುಳಿಗರಾಜ ಸನ್ನಿಧಿಯಲ್ಲಿ ಎಡೆ ಸಮರ್ಪಣೆ ನಡೆಯಿತು. ಗ್ರಾಮದ ಸುಭೀಕ್ಷೆಗಾಗಿ ಸಾಮೂಹಿಕ ಪ್ರಾರ್ಥನೆ ನೆರವೇರಿತು.

error: Content is protected !!