ಸೋಮವಾರಪೇಟೆಯಲ್ಲಿ 141 ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

April 8, 2021

ಸೋಮವಾರಪೇಟೆ ಏ. 8 : 94 ಸಿ. ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ 141 ಮಂದಿ ಫಲಾನುಭವಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಕ್ಕು ಪತ್ರ ವಿತರಿಸಿದರು.

ಶಾಸಕ ಕಚೇರಿಯಲ್ಲಿ ಹಕ್ಕು ಪತ್ರ ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಜಾಗದಲ್ಲಿ ಅನೇಕ ದಶಕಗಳಿಂದ ಮನೆ ಕಟ್ಟಿಕೊಂಡು ವಾಸವಿದ್ದವರಿಗೆ ಸರ್ಕಾರದ ಮೂಲಕ ಹಕ್ಕುಪತ್ರ ನೀಡಿ ಜಾಗವನ್ನು ಸಕ್ರಮಗೊಳಿಸಿದ್ದು, ಮುಂದಿನ ದಿನಗಳಲ್ಲಿ ಈ ಜಾಗವನ್ನು ಪರಭಾರೆ ಮಾಡಬಾರದು ಎಂದು ಎಚ್ಚರಿಸಿದರು.
ಹಕ್ಕುಪತ್ರವನ್ನು ಆಧಾರವಾಗಿಟ್ಟುಕೊಂಡು ಬ್ಯಾಂಕ್‍ಗಳಲ್ಲಿ ಮನೆ ನಿರ್ಮಾಣಕ್ಕೆ ಸಾಲ ಪಡೆಯಬಹುದು. ಇದನ್ನು ಹೊರತುಪಡಿಸಿ ಬೇರೆಯವರಿಗೆ ಪರಭಾರೆ ಮಾಡಿದ್ದು, ಕಂಡುಬಂದರೆ ಅಂತಹ ಜಾಗವನ್ನು ಸರ್ಕಾರಕ್ಕೆ ವಾಪಸ್ ಪಡೆದುಕೊಳ್ಳಲಾಗುವುದು ಎಂದರು.
ಈ ಸಂದರ್ಭ ತಾಲೂಕು ತಹಸೀಲ್ದಾರ್ ಆರ್. ಗೋವಿಂದರಾಜು, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಸದಸ್ಯ ಧರ್ಮಪ್ಪ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!