ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಸ್ಥಾಪನಾ ದಿನ ಆಚರಣೆ

April 8, 2021

ಸೋಮವಾರಪೇಟೆ ಏ. 8 : ಭಾರತೀಯ ಜನತಾ ಪಾರ್ಟಿಯ ವತಿಯಿಂದ ಪಟ್ಟಣದಲ್ಲಿರುವ ಪಕ್ಷದ ಕಚೇರಿಯಲ್ಲಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಸೇರಿದಂತೆ ಪಕ್ಷದ ಮುಖಂಡರು, ಡಾ. ಶ್ಯಾಂಪ್ರಸಾದ್ ಮುಖರ್ಜಿ ಹಾಗೂ ದೀನ ದಯಾಳ್ ಉಪಾಧ್ಯಾಯ ಅವರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು.
ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ್ ತಿಮ್ಮಯ್ಯ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೌತಮ್, ಮೋಕ್ಷಿತ್, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಸದಸ್ಯರಾದ ಹೆಚ್.ಎನ್.ತಂಗಮ್ಮ, ಧರ್ಮಪ್ಪ, ಪ್ರಮುಖರಾದ ಕೊಮಾರಪ್ಪ, ಲೀಲಾ ನಿರ್ವಾಣಿ, ಸುಮಾ ಸುದೀಪ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

error: Content is protected !!