ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 137

April 10, 2021

ಮಡಿಕೇರಿ ಏ. 10 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 21 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ.
19 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 7 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 7 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 8 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 8 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6548 ಆಗಿದ್ದು, 6328 ಮಂದಿ ಗುಣಮುಖರಾಗಿದ್ದಾರೆ.
137 ಸಕ್ರಿಯ ಪ್ರಕರಣಗಳಿದ್ದು, 83 ಮರಣ ಪ್ರಕರಣಗಳು
ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 100 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!