ದರ ಏರಿಕೆ ನೆಪ : MRP ಗಿಂತ ಹೆಚ್ಚಿನ ದರದಲ್ಲಿ ಗೊಬ್ಬರ ಮಾರುವಂತಿಲ್ಲ

April 12, 2021

ಮಡಿಕೇರಿ ಏ.12 : ಜಿಲ್ಲೆಯ ಖಾಸಗಿ ಹಾಗೂ ಸಹಕಾರಿ ರಸಗೊಬ್ಬರ ಮಾರಾಟಗಾರರು ಗೊಬ್ಬರ ಚೀಲದ ಮೇಲೆ ಮುದ್ರಿತ MRP ಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು ಎಂದು ಕೃಷಿ ಇಲಖೆಯ ಜಂಟಿ ನಿರ್ದೇಶಕರಾದ ಶಬನಾ ಎಂ.ಷೇಕ್ ಅವರು ಎಚ್ಚರಿಸಿದ್ದಾರೆ.
ರೈತರು ರಸಗೊಬ್ಬರ ಚೀಲಗಳ ಮೇಲೆ ಮುದ್ರಿತ ದರಗಳನ್ನು ಗಮನಿಸಿ ಖರೀದಿಸಬೇಕು. ಮಾರಾಟಗಾರರು ಚೀಲದ ಮೇಲೆ ಮುದ್ರಿತ ಧಾರಣೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಹತ್ತಿರದ ಕೃಷಿ ಇಲಾಖೆಯ ಕಚೇರಿಗೆ ದೂರು ನೀಡಬೇಕು. ರಸಗೊಬ್ಬರ ಮಾರಾಟಗಾರರು ಏಪ್ರಿಲ್ 1 ರಿಂದ ರಸಗೊಬ್ಬರ ಧಾರಣೆ ಏರಿಕೆಯಾಗಿದೆ ಎಂಬ ನೆಪವೊಡ್ಡಿ ಲಭ್ಯವಿರುವ ದಾಸ್ತಾನಿನ ರಸಗೊಬ್ಬರಗಳನ್ನು ಚೀಲದ ಮೇಲಿನ ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ. ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡು ಬಂದರೆ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ತಿಳಿಸಿದ್ದಾರೆ.

error: Content is protected !!