ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 176

April 14, 2021

ಮಡಿಕೇರಿ ಏ. 14 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 22 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ.
11 ಆರ್.ಟಿ.ಪಿ.ಸಿ.ಆರ್ ಮತ್ತು 11 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 7 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 11 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 7 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟ ಕೋವಿಡ್-19 ಪ್ರಕರಣಗಳ ಸಂಖ್ಯೆ 6649 ಆಗಿದ್ದು, 6390 ಮಂದಿ ಗುಣಮುಖರಾಗಿದ್ದಾರೆ.
176 ಸಕ್ರಿಯ ಪ್ರಕರಣಗಳಿದ್ದು, 83 ಮರಣ ಪ್ರಕರಣಗಳು
ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 132 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!