ಕೊಡಗು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ಧ ದೂರು ದಾಖಲು

April 16, 2021

ಸೋಮವಾರಪೇಟೆ ಏ.16 : ಕಾರನ್ನು ಅಡ್ಡಗಟ್ಟಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಟ್ಟಣ ಸಮೀಪದ ಹಾನಗಲ್ಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ವಿ.ಮಿಥುನ್, ಪಟ್ಟಣದ ನಿವಾಸಿ ಕಿರಣ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆಂಜನೇಯ ದೇವಾಲಯ ಬಳಿಯ ನಿವಾಸಿ ಸಂಪತ್‍ಕುಮಾರ್ ಅವರು ತಮ್ಮ ಕಾರಿನಲ್ಲಿ ಹಾನಗಲ್ಲು ಗಣಪತಿ ದೇವಾಲಯ ಸಮೀಪ ತೆರಳುತ್ತಿದ್ದ ಸಂದರ್ಭ ಕಾರನ್ನು ಅಡ್ಡಗಟ್ಟಿ, ಕಾರಿನ ಗಾಜನ್ನು ಪುಡಿಗೈದು ಹಲ್ಲೆ ನಡೆಸಿರುವ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿದೆ.
ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಅವರು ತನಿಖೆ ಕೈಗೊಂಡಿದ್ದಾರೆ.

error: Content is protected !!