ಉತ್ತರ ಕೊಡಗಿನ ಕುಂಬಾರಗಡಿಗೆಯಲ್ಲಿ ಭಾರೀ ಗಾಳಿ ಮಳೆ : ಬೀಳುವ ಸ್ಥಿತಿಯಲ್ಲಿರುವ ಮನೆ

April 16, 2021

ಮಡಿಕೇರಿ ಏ.16 : ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇಂದು ಉತ್ತರ ಕೊಡಗಿನ ಕುಂಬಾರಗಡಿಗೆ ಗ್ರಾಮದಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಒಂದು ಮನೆ ಬೀಳುವ ಹಂತಕ್ಕೆ ತಲುಪಿದೆ.
ಹಾನಿಗೀಡಾದ ಮನೆ ಕನ್ನಿಗಂಡ ಬಿ.ನೀಲಮ್ಮ ಎಂಬುವವರಿಗೆ ಸೇರಿದ್ದಾಗಿದ್ದು, ಅಧಿಕಾರಿಗಳು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಗಾಳಿ ಮಳೆಯಾಗುತ್ತಿದ್ದು, ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮುುಂದಾಗಬೇಕಿದೆ.

error: Content is protected !!