ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 292

April 17, 2021

ಮಡಿಕೇರಿ ಏ. 17 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 55 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
53 ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 28 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 28 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 22 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 20 ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟ ಕೋವಿಡ್-19 ಪ್ರಕರಣಗಳ ಸಂಖ್ಯೆ 6806 ಆಗಿದ್ದು, 6431 ಮಂದಿ ಗುಣಮುಖರಾಗಿದ್ದಾರೆ.
292 ಸಕ್ರಿಯ ಪ್ರಕರಣಗಳಿದ್ದು, 83 ಮರಣ ಪ್ರಕರಣಗಳು
ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 168 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!