ಕೋವಿಡ್ ನಿಯಂತ್ರಣ : ಸಚಿವರಿಂದ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಸಂವಾದ

April 17, 2021

ಮಡಿಕೇರಿ ಏ.17 : ಕೋವಿಡ್ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣ ಸಂಬಂಧ ವಿವಿಧ ಇಲಾಖೆಗಳು ಹಾಗೂ ಜಿಲ್ಲೆಯಲ್ಲಿ ತೆಗೆದುಕೊಂಡಿರುವ ಕ್ರಮಗಳ ಕುರಿತು ಕಂದಾಯ ಸಚಿವರಾದ ಆರ್.ಅಶೋಕ್, ಗೃಹ ಸಚಿವರಾದ ಎಸ್.ಆರ್.ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಕೆ.ಸುಧಾಕರ್ ಅವರು ಜಿಲ್ಲಾಧಿಕಾರಿ ಅವರ ಜೊತೆ ವಿಡಿಯೋ ಸಂವಾದ ಮೂಲಕ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಡಾ.ಮಹೇಶ್, ಡಾ.ಗೋಪಿನಾಥ್, ಡಾ.ಆನಂದ್ ಇತರರು ಮಾಹಿತಿ ನೀಡಿದರು.

error: Content is protected !!