ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಬೆಂಕಿಗೆ ಆಹುತಿ : ಮರಗೋಡು ಗ್ರಾಮದಲ್ಲಿ ಘಟನೆ

April 17, 2021

ಮಡಿಕೇರಿ ಏ.17 : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಮನೆಯೊಂದು ಸಂಪೂರ್ಣ ಸುಟ್ಟು ಹೋದ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಕಾನಡ್ಕ ಉತ್ತಪ್ಪ ಎಂಬವರ ಮನೆಯೇ ಬೆಂಕಿಗೆ ಆಹುತಿಯಾಗಿದ್ದು, ಅಂದಾಜು 5 ಲಕ್ಷ ರೂ. ನಷ್ಟ ಸಂಭವಿಸಿದೆ.
ಮನೆ ಮಂದಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಮನೆಯಲ್ಲಿದ್ದ ಗೃಹೋಪಯೋಗಿ ಹಾಗೂ ದಿನ ಬಳಕೆಯ ವಸ್ತುಗಳು ಸಂಪೂರ್ಣವಾಗಿ ಬೆಂಕಿಯ ಜ್ವಾಲೆಗೆ ಭಸ್ಮವಾಗಿದೆ. ಈ ಘಟನೆ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!