ರಸ್ತೆ ಅವಘಡದಲ್ಲಿ ಗಾಯಗೊಂಡಿದ್ದ ಯುವಕ ಸಾವು

April 17, 2021

ಮಡಿಕೇರಿ ಏ.17 : ರಸ್ತೆ ಅಪಘಾತದಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಒಂಟಿಯಂಗಡಿ ಗ್ರಾಮದ ನಿವಾಸಿ ವೆಂಕಟೇಶ್ ಎಂಬವರ ಪುತ್ರ ಕೀರ್ತನ್(26) ಸಾವನ್ನಪ್ಪಿರುವ ದುರ್ದೈವಿ.
ಅಮ್ಮತಿ ಒಂಟಿಯಂಗಡಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಇದೇ ಏ.13 ರಂದು ತೆರಳುತ್ತಿದ್ದ ಕೀರ್ತನ್‍ಗೆ ಗ್ರಾಮದ ನಿವಾಸಿ ದೇವಯ್ಯ ಎಂಬವರು ಚಾಲಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿತ್ತು. ಇದರ ಪರಿಣಾಮ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಕೀರ್ತನ್ ಇದೀಗ ಕೊನೆಯುಸಿರೆಳೆದಿದ್ದಾನೆ.
ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

error: Content is protected !!