ಮಹಿಳೆಯಿಂದಲೇ ಕಳ್ಳಭಟ್ಟಿ ದಂಧೆ !

April 17, 2021

ಮಡಿಕೇರಿ ಏ.17 : ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದ ಮಹಿಳೆಯನ್ನು ಬಂಧಿಸಿರುವ ಪ್ರಕರಣ ಕಣ್ಣಂಗಾಲ ಒಂಟಿಯಂಗಡಿ ಗ್ರಾಮದಲ್ಲಿ ನಡೆದಿದೆ.
ಕಣ್ಣಂಗಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಒಂಟಿಯಂಗಡಿ ಗ್ರಾಮದ ನಿವಾಸಿ, ಒಕ್ಕಲಿಗರ ವಾಸು ಎಂಬವರ ಲೈನ್ ಮನೆಯಲ್ಲಿ ವಾಸವಿರುವ ಮೀನಾ ಎಂಬಾಕೆಯನ್ನು ಕಳ್ಳಭಟ್ಟಿ ತಯಾರಿ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಸುಮಾರು 4.05 ಲೀ. ಕಳ್ಳಭಟ್ಟಿ ಸಾರಾಯಿ ಮತ್ತು ಅದನ್ನು ತಯಾರಿಸಲು ಬಳಕೆ ಮಾಡಿದ ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ.
ವಿರಾಜಪೇಟೆ ಉಪವಿಭಾಗದ ಡಿವೈಎಸ್‍ಪಿ ಸಿ.ಟಿ.ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕರಾದ ಬಿ.ಎಸ್.ಶ್ರೀಧರ್ ಅವರ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣೆಯ ಎಎಸ್‍ಐ ಶ್ರೀಧರ್, ಸಿಬ್ಬಂದಿಗಳಾದ ತೀರ್ಥಕುಮಾರ್, ನೆಹರುಕುಮಾರ್, ಶಿಲ್ಪ ಭಾಗವಹಿಸಿದ್ದರು.

error: Content is protected !!