ಆರ್ಜಿ ಗ್ರಾಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ : ಮಸೀದಿ ಮೇಲೆ ವಿರಾಜಪೇಟೆ ತಹಶೀಲ್ದಾರ್ ದಾಳಿ

April 29, 2021

ಮಡಿಕೇರಿ ಏ.29 : ಆರ್ಜಿ ಗ್ರಾಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿರುವ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆ ವಿರಾಜಪೇಟೆ ತಹಶೀಲ್ದಾರ್ ಯೋಗಾನಂದ್ ಹಾಗೂ ಪೊಲೀಸರು ಮಸೀದಿ ಮೇಲೆ ದಾಳಿ ನಡೆಸಿದರು.
ಮಾಸ್ಕ್ ಧರಿಸದೆ ಗುಂಪು ಗುಂಪಾಗಿ ಮಸೀದಿಯೊಳಗೆ ಸೇರಿದ್ದ ಜನರನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ ತಹಶೀಲ್ದಾರ್, ಮಸೀದಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದರು.
ನಿಯಮ ಉಲ್ಲಂಘಿಸಿದ್ದರೂ ತಮ್ಮ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿದ್ದ ಮಸೀದಿಯ ಪ್ರಮುಖರ ವಿರುದ್ಧ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.

error: Content is protected !!