ಯಾವ ರಾಜ್ಯದಲ್ಲಿ ಯಾರಿಗೆ ಅಧಿಕಾರ ?

May 2, 2021

ಮಡಿಕೇರಿ ಮೇ 2 : ಪಶ್ಚಿಮ ಬಂಗಾಳದದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮ್ಯಾಜಿಕ್ ನಂಬರ್ ಸಂಖ್ಯೆಗೆ ಅಗತ್ಯವಿರುವಷ್ಟು ಮುನ್ನಡೆ ಸಾಧಿಸಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದೆ. ಬಿಜೆಪಿ ರಾಜ್ಯದಲ್ಲಿ ಈ ಬಾರಿ  ಟಿಎಂಸಿಗೆ ಪ್ರಬಲ ಪೈಪೋಟಿ ನೀಡಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 

ತಮಿಳುನಾಡಿನಲ್ಲಿ ಬಿಜೆಪಿ ಸೋತಿದೆ, ಆಡಳಿತಾರೂಢ ಎಐಎಡಿಎಂಕೆಗೆ ಮುಖಭಂಗವಾಗಿದೆ. ತಮಿಳುನಾಡಿನಲ್ಲಿ ಆಡಳಿತ ಡಿಎಂಕೆ ಪಾಲಾಗಿದೆ.
 
ಕೇರಳದಲ್ಲಿ ಆಡಳಿತಾರೂಢ ಲೆಫ್ಟ್ ಡೆಮಾಕ್ರೆಟಿಕ್ ಫ್ರಂಟ್ 140 ಕ್ಷೇತ್ರಗಳ ಪೈಕಿ 89 ರಲ್ಲಿ ಮುನ್ನಡೆಯಲ್ಲಿದ್ದು ಬಹುಮತ ಪಡೆಯುವ ಎಲ್ಲಾ ಸಾಧ್ಯತೆಗಳಿದೆ. ವಿಪಕ್ಷ ಯುಡಿಎಫ್ 45 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಅಸ್ಸಾಂ ನಲ್ಲಿ 126 ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್ ಡಿಎ 79 ರಲ್ಲಿ ಮುನ್ನಡೆಯಲ್ಲಿದ್ದರೆ, ಯುಪಿಎ 46 ರಲ್ಲಿ ಇತರರು ಒಂದರಲ್ಲಿ ಮುನ್ನಡೆ ಸಾಧಿಸಿದ್ದಾರೆ. ಎನ್ ಡಿಎ ಅಧಿಕಾರ ಹಿಡಿಯಲಿದೆ.   

30 ಕ್ಷೇತ್ರಗಳಿರುವ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಎನ್ ಆರ್ ಸಿ ಮೈತ್ರಿಕೂಟ 11 ರಲ್ಲಿ, ಯುಪಿಎ 6 ರಲ್ಲಿ ಮುನ್ನಡೆ ಸಾಧಿಸಿದೆ. 

error: Content is protected !!