ಸೋಮವಾರಪೇಟೆ ತಾಲ್ಲೂಕಿನಲ್ಲಿ ಸೋಂಕಿತರ ಸಂಖ್ಯೆ ಅತಿಹೆಚ್ಚು

May 4, 2021

ಮಡಿಕೇರಿ ಮೇ 4 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 658 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 622 ಆರ್.ಟಿ.ಪಿ.ಸಿ.ಆರ್ ಮತ್ತು 36 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 321 ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ 306 ಆರ್.ಟಿ.ಪಿ.ಸಿ.ಆರ್ ಮತ್ತು 15 ಪ್ರಕರಣಗಳು ರಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 227 ಮತ್ತು ವಿರಾಜಪೇಟೆ ತಾಲೂಕಿನಲ್ಲಿ 110 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 13,132 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 576 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 8621 ಮಂದಿ ಗುಣಮುಖರಾಗಿದ್ದಾರೆ.

error: Content is protected !!