ಕೋವಿಡ್ ಅತಿರೇಕ : ಉಸ್ತುವಾರಿ ಸಚಿವರಿಂದ ಸಭೆ

May 4, 2021

ಮಡಿಕೇರಿ ಮೇ 4 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮೇ 6 ರಂದು ಜಿಲ್ಲೆ ಭೇಟಿ ನೀಡಲಿದ್ದು, ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರ್‌ಗಳಿಗೆ ಭೇಟಿ ನೀಡಲಿದ್ದಾರೆ. ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.
ಬಳಿಕ ಮಧ್ಯಾಹ್ನ 1 ಗಂಟೆಗೆ ಮಡಿಕೇರಿಗೆ ಆಗಮಿಸಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆ ಸಂಬಂಧಿಸಿದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಸಂಬAಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 3.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ತೆರೆದಿರುವ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್‌ಗೆ ಭೇಟಿ ಹಾಗೂ ತಾಲ್ಲೂಕಿನಲ್ಲಿ ಕೋವಿಡ್ 19 ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆ ಸಂಬಂಧಿಸಿದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.

error: Content is protected !!