ಸುಂಟಿಕೊಪ್ಪ ಆಸ್ಪತ್ರೆ ಆಂಬ್ಯುಲೆನ್ಸ್ ಕೆಟ್ಟು ನಿಂತು 3 ತಿಂಗಳಾಯಿತು !

May 5, 2021

ಸುಂಟಿಕೊಪ್ಪ ಮೇ 5 : ಆಂಬ್ಯುಲೆನ್ಸ್ ಕೆಟ್ಟು 3 ತಿಂಗಳಾಗಿದೆ, ದುರಸ್ತಿಗೆ ಹೋದ ವಾಹನ ಇಲ್ಲಿಯವರೆಗೆ ಮರಳಿಲ್ಲ, ಸಿಬ್ಬಂದಿಗಳ ಕೊರತೆ ಬೇರೆ ಇದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುತ್ತಿಲ್ಲವೆಂದು ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅವರು ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭ ಕೊರತೆಗಳ ಬಗ್ಗೆ ವೈದ್ಯಾಧಿಕಾರಿಗಳು ವಿವರಿಸಿದರು.
ವೈದ್ಯಾಧಿಕಾರಿಗಳಾದ ಡಾ.ಜೀವನ್ ಹಾಗೂ ಡಾ.ನಿಸರ್ಗ ಅವರು ಮಾತನಾಡಿ ಆಸ್ಪತ್ರೆಯ ಆಂಬ್ಯುಲೆನ್ಸ್ ದುರಸ್ತಿಗೆ ಹೋಗಿ 3 ತಿಂಗಳು ಕಳೆದಿದೆ. ಆದರೆ ಮರಳಿಲ್ಲ, ಇದರಿಂದ ರೋಗಿಗಳನ್ನು ಸ್ಥಳಾಂತರಿಸಲು ಕಷ್ಟಸಾಧ್ಯವಾಗುತ್ತಿದೆ. ಶುಶ್ರೂಷಕಿಯರು ಸೇರಿದಂತೆ ಸಿಬ್ಬಂದಿಗಳ ಕೊರತೆ ಇದೆ ಎಂದರು.
ಈ ಸಂದರ್ಭ ಮಾತನಾಡಿದ ಶಾಸಕರು ವೈದ್ಯರು ಹಾಗೂ ಸಿಬ್ಬಂದಿಗಳ ಸೇವೆಯನ್ನು ಶ್ಲಾಘಿಸಿದರು. ತಾತ್ಕಲಿಕವಾಗಿ ಬದಲಿ ವಾಹನವನ್ನು ಬಳಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದ ಅವರು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಆಂಬ್ಯುಲೆನ್ಸ್ ಕೆಟ್ಟು 3 ತಿಂಗಳಾಗಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

error: Content is protected !!