ಟಫ್ ರೂಲ್ಸ್ ಜಾರಿ : ಮದುವೆ, ಗೃಹಪ್ರವೇಶ ಮಾಡುವ ಹಾಗಿಲ್ಲ : ವಾಹನ ಸೀಜ಼್ ಆಗುತ್ತೆ …

May 6, 2021

ಮಡಿಕೇರಿ ಮೇ 6 : ಕೊರೊನಾ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಫ್ ರೂಲ್ಸ್ ಜಾರಿಗೆ ತರಲಾಗಿದೆ.
ಶುಕ್ರವಾರದಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್ ಆಗಲಿದೆ. ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಆದೇಶ ನೀಡಿದೆ.
ಮೇ 15 ರ ಬಳಿಕ ಯಾವ ಕಾರ್ಯಕ್ರಮಗಳಿಗೂ ಇಲ್ಲ ಅವಕಾಶ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ. ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲು ಆಯೋಜಕರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ಕ್ರಮ ಕೈಗೊಳ್ಳಲಾಗುವುದು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

error: Content is protected !!