ಕೊಡಗು ಕೋವಿಡ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಸಿಸಿಟಿವಿ !

May 6, 2021

ಮಡಿಕೇರಿ ಮೇ 6 : ಕೊಡಗಿನ ಕೋವಿಡ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಸಿಸಿಟಿವಿ ಅಳವಡಿಸಬೇಕೆಂದು ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಲ್ಲಿ ಮನವಿ ಮಾಡಿದ್ದಾರೆ.
ಇಂದು ನಗರದಲ್ಲಿ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಕುರಿತಾದ ವಿಶೇಷ ಸಭೆಯಲ್ಲಿ ಸೋಂಕಿತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.
ಕೋವಿಡ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಸಿಸಿಟಿವಿ ಅಳವಡಿಸಿದರೆ ರೋಗಿಗಳ ಸ್ಥಿತಿಗತಿಯನ್ನು ತಕ್ಷಣ ತಿಳಿಯಬಹುದಾಗಿದೆ ಮತ್ತು ವೈದ್ಯರುಗಳು ಸ್ಪಂದಿಸಬಹುದಾಗಿದೆ ಎಂದು ವೀಣಾಅಚ್ಚಯ್ಯ ಅಭಿಪ್ರಾಯಪಟ್ಟರು.

error: Content is protected !!