ಕೊಡಗು : ಮೂರು ಪಾಳಿಯಲ್ಲಿ ವೈದ್ಯರು ಸೋಂಕಿತರಿಗೆ ಚಿಕಿತ್ಸೆ ನೀಡಬೇಕು

May 6, 2021

ಮಡಿಕೇರಿ ಮೇ 6 : ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ದಿನದ ಮೂರು ಪಾಳಿಯಲ್ಲಿ ವೈದ್ಯರು ಸೋಂಕಿತರಿಗೆ ಚಿಕಿತ್ಸೆ ನೀಡಬೇಕು. ಯಾವುದೇ ಕಾರಣಕ್ಕೂ ವೈದ್ಯರು ಇರುವುದಿಲ್ಲ ಎಂದು ದೂರು ಬಾರದಂತೆ ಕಾರ್ಯನಿರ್ವಹಿಸಬೇಕು. ವೈದ್ಯರು ಸೋಂಕಿತರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ನಿರ್ದೇಶನ ನೀಡಿದರು.
ಮಡಿಕೇರಿಯಲ್ಲಿ ವೈದ್ಯಾಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಅಗತ್ಯ ಸಲಹೆಗಳನ್ನು ನೀಡಿದರು. ಹೋಂ ಐಷೋಲೇಶನ್‌ಲ್ಲಿ ಇರುವ ಸೋಂಕಿತರ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು, ಇತರರ ಸಂಪರ್ಕಕ್ಕೆ ಬರದಂತೆ ಎಚ್ಚರವಹಿಸಬೇಕು ಮತ್ತು ಅವರಿಗೆ ಸೀಲ್ ಹಾಕುವ ಕಾರ್ಯ ಮಾಡಬೇಕು. ಹೊರಗಡೆ ಓಡಾಡುವ ಸೋಂಕಿತರ ವಿರುದ್ಧ ನಿರ್ದಾಕ್ಷಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

error: Content is protected !!