ಪೌರಕಾರ್ಮಿಕರ ಆರೋಗ್ಯ ಕಾಪಾಡುವುದು ಮುಖ್ಯ

07/05/2021

ಸೋಮವಾರಪೇಟೆ ಮೇ 7 : ಸಂಕಷ್ಟದ ದಿನಗಳಲ್ಲಿ ಪಟ್ಟಣವನ್ನು ಸ್ವಚ್ಛಗೊಳಿಸಿ ಅರೋಗ್ಯ ಕಾಪಾಡುವಲ್ಲಿ ತಮ್ಮ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಳಿನಿ ಗಣೇಶ್ ಹೇಳಿದರು.
ಪಂಚಾಯಿತಿಯ ಪೌರಕಾರ್ಮಿಕರಿಗೆ ಮಾಸ್ಕ್, ಫೇಸ್ ಸೀಲ್ಡ್ ಸೇರಿದಂತೆ ಇನ್ನಿತರ ಪರಿಕರಗಳನ್ನು ಶುಕ್ರವಾರ ವಿತರಿಸಿ ಮಾತನಾಡಿದರು. ಕಾರ್ಮಿಕರು ತಮ್ಮ ಕರ್ತವ್ಯದ ಜೊತೆಗೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಅಲ್ಲದೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭ ಉಪಾಧ್ಯಕ್ಷ ಬಿ.ಸಂಜೀವ, ಮುಖ್ಯಾಧಿಕಾರಿ ನಾಚಪ್ಪ ಇದ್ದರು.