ಸೋಮವಾರಪೇಟೆ ಪಟ್ಟಣದಲ್ಲಿ 48 ಮನೆಗಳು ಸೀಲ್ ಡೌನ್

May 7, 2021

ಸೋಮವಾರಪೇಟೆ ಮೇ 7 : ಸೋಮವಾರಪೇಟೆ ಪಟ್ಟಣದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪಟ್ಟಣ ವಾಸಿಗಳು ಕೊವೀಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಳಿನಿ ಗಣೇಶ್ ಮನವಿ ಮಾಡಿದ್ದಾರೆ.
ಕೋವಿಡ್ ರೂಪಾಂತರ ಸೋಂಕು ಹರಡಿದ ನಂತರ ಪಟ್ಟಣ ವ್ಯಾಪ್ತಿಯಲ್ಲಿ 72 ಸೋಂಕಿತ ಪ್ರಕರಣಗಳು ದಾಖಲಾಗಿವೆ. 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 48 ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪಟ್ಟಣದಲ್ಲಿ ಪ್ರತಿ 11 ವಾರ್ಡ್ಗಳಲ್ಲೂ ಸ್ಯಾನಿಟೈಸ್ ಮಾಡಲಾಗುತ್ತಿದೆ. ಸ್ವಚ್ಚತಗೆ ಹೆಚ್ಚಿನ ಅಧ್ಯತೆ ನೀಡಲಾಗುತ್ತಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರ ವಹಿಸಲಾಗುವುದು ಎಂದರು. ಗೋಷ್ಠಿಯಲ್ಲಿ ಪಂಚಾಯಿತಿ ಉಪಾಧ್ಯಕ್ಷ ಬಿ.ಸಂಜೀವ ಇದ್ದರು.

error: Content is protected !!