ನಂಜರಾಯಪಟ್ಟಣ ಗ್ರಾ.ಪಂ ಕೋವಿಡ್ ಕಾರ್ಯಪಡೆ ಸಮಿತಿ ಸಭೆ

May 7, 2021

ಮಡಿಕೇರಿ ಮೇ 7 : ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯ (ಕೋವಿಡ್-19) ಗ್ರಾಮ ಮಟ್ಟದ ಕಾರ್ಯಾಪಡೆ ಸಮಿತಿ ಸಭೆ ನಡೆಯಿತು.
ಸೋಂಕು ವ್ಯಾಪಿಸದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಪಂಚಾಯಿತಿ ಅಧ್ಯಕ್ಷ ಸಿ.ಎಲ್.ವಿಶ್ವ ಅವರು ಸೂಚನೆ ನೀಡಿದರು.
ಆರೋಗ್ಯ ಇಲಾಖೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಶಾಲಾ ಮುಖ್ಯೋಪಾಧ್ಯಾಯರು, ಬೂತ್ ಮಟ್ಟದ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

error: Content is protected !!