ಕೊಡಗಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ : ಸೋಮವಾರ, ಶುಕ್ರವಾರ ಮಾತ್ರ …

May 8, 2021

ಮಡಿಕೇರಿ ಮೇ 9 : ಕೊಡಗು ಜಿಲ್ಲೆಯಲ್ಲಿ ಕರ್ಫ್ಯೂ ಸಮಯದ ಬಗ್ಗೆ ಈ ಕೆಳಗಿನಂತೆ ಕೊಡಗು ಜಿಲ್ಲಾಡಳಿತ ಸ್ಪಷ್ಟೀಕರಣ ನೀಡಿದೆ.
ದಿನಾಂಕ 6.5.2021 ರಂದು ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಂತೆ, ಕೊಡಗು ಜಿಲ್ಲೆಯಲ್ಲಿ ಮಂಗಳವಾರದ ಬದಲು ಸೋಮವಾರ ಮತ್ತು ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಕರ್ಫ್ಯೂ ರಿಯಾಯಿತಿ ನೀಡಲಾಗಿದೆ. ಉಳಿದಂತೆ ಈ ಹಿಂದೆ ನೀಡಿದ ಸೂಚನೆಗಳು ಹಾಗೂ ರಾಜ್ಯ ಸರ್ಕಾರ ದಿನಾಂಕ  7.5.2021 ರಂದು ಹೊರಡಿಸಿದ ಆದೇಶ ಜಾರಿಯಲ್ಲಿ ಇರುತ್ತದೆ. ಜಿಲ್ಲಾಧಿಕಾರಿ, ಕೊಡಗು.****

ಕೋವಿಡ್ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯ ಸರ್ಕಾರ ಮೇ 10 ರಿಂದ 24 ರವರೆಗೆ ಲಾಕ್ ಡೌನ್ ಘೋಷಿಸಿ ಮಾರ್ಗಸೂಚಿಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಆದೇಶಿಸಿತ್ತು.
ಆದರೆ ಕೊಡಗಿನಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಕಠಿಣ ನಿಯಮಾವಳಿಗಳೇ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯ ವ್ಯಾಪಿ ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆಯಾದರೂ ಕೊಡಗು ಜಿಲ್ಲೆಯಲ್ಲಿ ಪ್ರತಿ ಸೋಮವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ವಸ್ತುಗಳ ಖರೀದಿಗೆ ಅವಕಾಶವಿದೆ. ಇತರ ದಿನಗಳಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಹಾಲು ಮತ್ತು ಪತ್ರಿಕೆಗಳ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ.
ಸೋಮವಾರ ಮತ್ತು ಶುಕ್ರವಾರ ಜನಜಂಗುಳಿಯಾಗದಂತೆ ಸಾರ್ವಜನಿಕರು ಸಹಕಾರ ನೀಡುವ ಮೂಲಕ ಮಾಸ್ಕ್ ಕಡ್ಡಾಯವಾಗಿ ಧರಿಸಿ ಅಂತರ ಕಾಯ್ದುಕೊಳ್ಳಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಸ್ಥಳೀಯವಾಗಿ ಇರುವ ಅಂಗಡಿಗಳಿಂದಲೇ ವಸ್ತುಗಳನ್ನು ಖರೀದಿ ಮಾಡಿ, ದೂರದ ಪ್ರದೇಶಕ್ಕೆ ಹೋಗಬೇಡಿ, ವಾಹನಗಳನ್ನು ಬಳಸಬೇಡಿ ಎಂದು ಸಲಹೆ ನೀಡಿದೆ.

error: Content is protected !!