ಸೋಮವಾರ ಅಲ್ಲ, ಮಂಗಳವಾರ ಮತ್ತು ಶುಕ್ರವಾರ ಮಾತ್ರ : ಜಿಲ್ಲಾಧಿಕಾರಿ ಸ್ಪಷ್ಟನೆ

May 8, 2021

ಮಡಿಕೇರಿ ಮೇ 8 : ತಾವು ಕಳೆದ ವಾರ ಆದೇಶ ಮಾಡಿದಂತೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ, ಸೋಮವಾರ ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸ್ಪಷ್ಟಪಡಿಸಿದ್ದಾರೆ.
“ನ್ಯೂಸ್ ಡೆಸ್ಕ್” ನೊಂದಿಗೆ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವರು ಸೋಮವಾರ ಮತ್ತು ಶುಕ್ರವಾರ ಎಂದು ಸಲಹೆ ನೀಡಿರುವುದು ನಿಜ, ಆದರೆ ಈ ಹಿಂದೆಯೇ ಆದೇಶ ಮಾಡಿ ಆಗಿರುವುದರಿಂದ ಸಚಿವರ ಸಲಹೆ ಕುರಿತು ಮೇ 10 ರಂದು ಸಭೆ ನಡೆಸಿ ಚರ್ಚೆ ನಡೆಸಿದ ನಂತರ ಬದಲಾವಣೆಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಹಿಂದಿನ ಆದೇಶದಂತೆ ಮಂಗಳವಾರ ಮತ್ತು ಶುಕ್ರವಾರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಸೋಮವಾರವಿಲ್ಲವೆಂದು ಸ್ಪಷ್ಟಪಡಿಸಿದರು.
ಕೋವಿಡ್ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯ ಸರ್ಕಾರ ಮೇ 10 ರಿಂದ 24 ರವರೆಗೆ ಲಾಕ್ ಡೌನ್ ಘೋಷಿಸಿ ಮಾರ್ಗಸೂಚಿಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಆದೇಶಿಸಿತ್ತು.
ಆದರೆ ಕೊಡಗಿನಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಕಠಿಣ ನಿಯಮಾವಳಿಗಳೇ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯ ವ್ಯಾಪಿ ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆಯಾದರೂ ಕೊಡಗು ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ವಸ್ತುಗಳ ಖರೀದಿಗೆ ಅವಕಾಶವಿದೆ. ಇತರ ದಿನಗಳಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಹಾಲು ಮತ್ತು ಪತ್ರಿಕೆಗಳ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ.
ಮಂಗಳವಾರ ಮತ್ತು ಶುಕ್ರವಾರ ಜನಜಂಗುಳಿಯಾಗದAತೆ ಸಾರ್ವಜನಿಕರು ಸಹಕಾರ ನೀಡುವ ಮೂಲಕ ಮಾಸ್ಕ್ ಕಡ್ಡಾಯವಾಗಿ ಧರಿಸಿ ಅಂತರ ಕಾಯ್ದುಕೊಳ್ಳಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಸ್ಥಳೀಯವಾಗಿ ಇರುವ ಅಂಗಡಿಗಳಿAದಲೇ ವಸ್ತುಗಳನ್ನು ಖರೀದಿ ಮಾಡಿ, ದೂರದ ಪ್ರದೇಶಕ್ಕೆ ಹೋಗಬೇಡಿ, ವಾಹನಗಳನ್ನು ಬಳಸಬೇಡಿ ಎಂದು ಸಲಹೆ ನೀಡಿದೆ.

error: Content is protected !!