ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು 5064

May 9, 2021

ಮಡಿಕೇರಿ ಮೇ 9 : ಕೊಡಗು ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 8 ಗಂಟೆ ವೇಳೆಗೆ 691ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 667 ಆರ್.ಟಿ.ಪಿ.ಸಿ.ಆರ್ ಮತ್ತು 24 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 16,432 ಆಗಿದ್ದು,
ಕಳೆದ 24 ಗಂಟೆಗಳ ಅವಧಿಯಲ್ಲಿ 806 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 11,191 ಮಂದಿ ಗುಣಮುಖರಾಗಿದ್ದು, 5064 ಸಕ್ರಿಯ ಪ್ರಕರಣಗಳಿವೆ.
ಮಡಿಕೇರಿ ತಾಲ್ಲೂಕಿನಲ್ಲಿ 284, ಸೋಮವಾರಪೇಟೆ ತಾಲ್ಲೂಕಿನಲ್ಲಿ 198 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 209 ಪ್ರಕರಣಗಳು ದೃಢಪಟ್ಟಿದೆ.

error: Content is protected !!