ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು 5046

May 12, 2021

ಮಡಿಕೇರಿ ಮೇ 12 : ಕೊಡಗು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 18,314 ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, ಪ್ರಸ್ತುತ 5046 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 552 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 506 ಆರ್.ಟಿ.ಪಿ.ಸಿ.ಆರ್ ಮತ್ತು 46 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲ್ಲೂಕಿನಲ್ಲಿ 250, ಸೋಮವಾರಪೇಟೆ ತಾಲ್ಲೂಕಿನಲ್ಲಿ 164 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 138 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 648 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇಲ್ಲಿವರೆಗೆ ಒಟ್ಟು 13,078 ಮಂದಿ ಗುಣಮುಖರಾಗಿದ್ದಾರೆ.

error: Content is protected !!