ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ
12/05/2021

ಮಡಿಕೇರಿ ಮೇ 12 : ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯದ 31 ವಿವಿಧ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಯಾಗಲಿದೆ ಎಂದು ಕೊಡಗು- ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.