ಕೋವಿಡ್ ನಿರೋಧಕ ಲಸಿಕೆ ಪಡೆದ ಪತ್ರಕರ್ತರು

13/05/2021

ಮಡಿಕೇರಿ ಮೇ 13 : ಪತ್ರಕರ್ತರು ಹಾಗೂ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಕೋವಿಡ್ ಫ್ರಂಟ್‌ಲೈನ್ ವಾರಿರ‍್ಸ್ ಎಂದು ಸರ್ಕಾರ ಈಗಾಗಲೇ ಪ್ರಕಟಿಸಿದೆ.
ಆ ದಿಸೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಭವನದಲ್ಲಿ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಎರಡು ದಿನಗಳ ಕಾಲ ಕೋವಿಡ್ ನಿರೋಧಕ ಲಸಿಕೆ ನೀಡಲಾಯಿತು.
ಮೇ 12 ರಂದು 69 ಮಂದಿ ಮತ್ತು 13 ರಂದು 44 ಮಂದಿ ಒಟ್ಟು 113 ಮಂದಿ ಪತ್ರಕರ್ತರು ಹಾಗೂ ಸಿಬ್ಬಂಧಿಗಳು ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.