ಬೆಸಗೂರು ಗ್ರಾಮದಲ್ಲಿ ಆತಂಕ ಮೂಡಿಸಿರುವ ವ್ಯಾಘ್ರ
13/05/2021

ಮಡಿಕೇರಿ ಮೇ 13 : ಕೋವಿಡ್ ಸಂದಿಗ್ಧ ಪರಿಸ್ಥಿತಿಯ ನಡುವೆಯೇ ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ಆತಂಕ ಗ್ರಾಮಸ್ಥರ ನಿದ್ದೆಗೆಡಿಸಿದೆ. ಬೆಸಗೂರು ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತುಗಳು ಕಾಣಿಸಿಕೊಂಡಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.
ಗದ್ದೆ ಪ್ರದೇಶದಲ್ಲಿ ಹುಲಿ ಹಾದು ಹೋಗಿರುವ ಬಗ್ಗೆ ಸಂಶಯವಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.