ಮಡಿಕೇರಿ ತಾಲ್ಲೂಕಿನಲ್ಲಿ ತಗ್ಗದ ಸೋಂಕಿತರ ಸಂಖ್ಯೆ

14/05/2021

ಮಡಿಕೇರಿ ಮೇ 14 : ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 472 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 439 ಆರ್.ಟಿ.ಪಿ.ಸಿ.ಆರ್ ಮತ್ತು 33 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಅತಿಹೆಚ್ಚು 239 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 117 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 116 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 19,270 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 669 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು 14,046 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ನೀಡಿದ್ದಾರೆ.