ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು 4808

15/05/2021

ಮಡಿಕೇರಿ ಮೇ 15 : ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 488 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 457 ಆರ್.ಟಿ.ಪಿ.ಸಿ.ಆರ್ ಮತ್ತು 31 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಜಿಲ್ಲೆಯಲ್ಲಿ 4808 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 485 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಮಡಿಕೇರಿ ತಾಲ್ಲೂಕಿನಲ್ಲಿ 211, ಸೋಮವಾರಪೇಟೆ ತಾಲ್ಲೂಕಿನಲ್ಲಿ 189 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 88 ಹೊಸ ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 19,758 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 679 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು 14,725 ಮಂದಿ ಗುಣಮುಖರಾಗಿದ್ದಾರೆ.