ಮೇಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸೋಂಕಿತರ ಸಂಖ್ಯೆ ಅಧಿಕ

15/05/2021

ಮಡಿಕೇರಿ ಮೇ 15 : ಕೊಡಗಿನ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮಡಿಕೇರಿ ಸಮೀಪದ ಮೇಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ.
ಸೋಂಕು ಮತ್ತಷ್ಟು ವ್ಯಾಪಿಸದಂತೆ ತಡೆಯಲು ಪಂಚಾಯ್ತಿ ಅಧ್ಯಕ್ಷ ಬಿ.ಬಿ.ದಿನೇಶ್ ಹಾಗೂ ಒಂದನೇ ವಾರ್ಡ್ನ ಸದಸ್ಯ ಎಂ.ಇ.ಹನೀಫ್ ಮೇಕೇರಿ ಅವರು ಸ್ಯಾನಿಟೈಸ್ ಕಾರ್ಯವನ್ನು ಈಗಾಗಲೇ ಕೈಗೊಂಡಿದ್ದಾರೆ. ಇಲ್ಲಿಯವರೆಗೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಟ್ಟು 208 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳು 60 ಆಗಿದ್ದು, ಗ್ರಾಮಸ್ಥರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವೆಂದು ಪಂಚಾಯ್ತಿ ಮನವಿ ಮಾಡಿದೆ.