ಮಡಿಕೇರಿ ಮೆಡಿಕಲ್ ಕಾಲೇಜ್ ನಲ್ಲಿ 100 ಹಾಸಿಗೆಗಳ ಡಿಸಿಎಚ್‌ಸಿ ಕೇಂದ್ರ ಉದ್ಘಾಟನೆ

May 16, 2021

ಮಡಿಕೇರಿ ಮೇ 16 : ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ತೆರೆಯಲಾಗಿರುವ 100 ಹಾಸಿಗೆಗಳ ಡಿಸಿಎಚ್‌ಸಿ ಕೇಂದ್ರವನ್ನು ಸಚಿವ ವಿ.ಸೋಮಣ್ಣ ಅವರು ಉದ್ಘಾಟಿಸಿದರು. ವೈದ್ಯಕೀಯ ವ್ಯವಸ್ಥೆಯಲ್ಲಿ ಯಾವುದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದೆಂದು ಸೂಚನೆ ನೀಡಿದರು.
ಇದಕ್ಕೂ ಮೊದಲು ಸಚಿವರು ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಲಿಸಿದರು. ನಂತರ ಸೋಮವಾರಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದರು.

error: Content is protected !!