ಗುಣಮುಖರಾದವರ ಸಂಖ್ಯೆ ಹೆಚ್ಚು

May 16, 2021

ಮಡಿಕೇರಿ ಮೇ 16 : ಕರ್ನಾಟದಲ್ಲಿ ಇಂದು 31 ಸಾವಿರದ 531 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 22,03,462 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6,00,147 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 403 ಮಂದಿ ಸಾವನ್ನಪ್ಪಿದ್ದು, ಇಲ್ಲಿಯವರೆಗೆ ಸೋಂಕಿನಿAದ ಮೃತಪಟ್ಟವರ ಒಟ್ಟು ಸಂಖ್ಯೆ 21,837 ಆಗಿದೆ.
ರಾಜ್ಯದಲ್ಲಿ ಭಾನುವಾರ ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿರುವುದಕ್ಕಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಇಂದು 36 ಸಾವಿರದ 475 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 15,81,457ಕ್ಕೆ ಏರಿಕೆಯಾಗಿದೆ.

error: Content is protected !!