ಆಹಾರದ ಗುಣಮಟ್ಟ ಪರಿಶೀಲಿಸಿದ ಜಿಲ್ಲಾಧಿಕಾರಿ

May 17, 2021

ಮಡಿಕೇರಿ ಮೇ 17 : ಮಡಿಕೇರಿ ತಾಲ್ಲೂಕಿನ ಗಾಳಿಬೀಡುವಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ವಿತರಿಸಲಾಗುತ್ತಿರುವ ಆಹಾರದ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಆರೈಕೆ ಕೇಂದ್ರಕ್ಕೆ ಆಹಾರ ಪೂರೈಕೆಯಾಗುತ್ತಿರುವ ಬಿ.ಸಿ.ಎಂ ಹಾಸ್ಟೆಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ ತಾಲ್ಲೂಕು ತಹಶೀಲ್ದಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮತ್ತಿತರ ಸಿಬ್ಬಂದಿಗಳು ಹಾಜರಿದ್ದರು.

error: Content is protected !!