ಕೊಡವ ಕಲ್ಚರಲ್ ಅಸೋಸಿಯೇಶನ್ ನಿಂದ ಕೋವಿಡ್ ಸಂತ್ರಸ್ತರಿಗೆ ಕಿಟ್ ವಿತರಣೆ

18/05/2021

ಸಿದ್ದಾಪುರ ಮೇ 18: ಕೊರೊನಾ ಸೀಲ್ ಡೌನ್ ವ್ಯಾಪ್ತಿಯಲ್ಲಿರುವ ಸಂತ್ರಸ್ತ ಕುಟುಂಬಗಳಿಗೆ ವಿತರಿಸಲು ಸಿದ್ಧಾಪುರ ಕೊಡವ ಕಲ್ಚರಲ್ ಅಸೋಸಿಯೇಶನ್ 25 ಸಾವಿರ ರೂ. ಮೌಲ್ಯದ 30 ಕಿಟ್ ಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿತು.
ಅಸೋಸಿಯೇಶನ್ ಅಧ್ಯಕ್ಷ ಕುಕ್ಕೆರ ಕೇಶು ಉತ್ತಪ್ಪ ಮಾತನಾಡಿ
ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಮಹಾಮಾರಿಯಿಂದ ಸೀಲ್ ಡೌನ್ ವ್ಯಾಪ್ತಿಯಲ್ಲಿ ಹಲವು ಕುಟುಂಬಗಳು ಸಂಕಷ್ಟದಲ್ಲಿರುವುದನ್ನು ಅರಿತು. ಕೊಡವ ಕಲ್ಚರಲ್ ಅಸೋಸಿಯೇಶನ್ ವತಿಯಿಂದ ಗ್ರಾಮ ಪಂಚಾಯಿತಿ ಮೂಲಕ ವಿತರಿಸಲು ಪಂಚಾಯ್ತಿ ಅಧ್ಯಕ್ಷರಿಗೆ ಕಿಟ್ ಗಳನ್ನು ಹಸ್ತಾಂತರಿಸಲಾಗಿದೆ ಎಂದರು.
ಆಡಳಿತ ಮಂಡಳಿಯ ಸದಸ್ಯ ದೇವಣಿರ ಸುಜಯ್ ಮಾತನಾಡಿ ಕೊಡವ ಕಲ್ಚರಲ್ ಅಸೋಸಿಯೇಶನ್ ವತಿಯಿಂದ ಕಳೆದ ಹಲವು ವರ್ಷಗಳಿಂದಲೂ ಗ್ರಾಮದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದು ಕಳೆದ ಪ್ರವಾಹ ಸಂದರ್ಭದಲ್ಲೂ ಸಂಕಷ್ಟದಲ್ಲಿರುವವರಿಗೆ ನೆರವಾಗಿದೆ ಎಂದರು.
ಈ ಸಂದರ್ಭ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರೀನಾ ತುಳಸಿ,ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್,ಕೊಡವ ಕಲ್ಚರಲ್ ಅಸೋಸಿಯೇಶನ್ ನ ಪ್ರಮುಖರಾದ ಪಾಲಚಂಡ ಅಚ್ಚಯ್ಯ,ಚೇಂದಂಡ ಚುಮ್ಮಿ ಪೂವಯ್ಯ, ಚೇರಂಡ ಸುನೀಲ್,ಬಲ್ಲಾರಂಡ ಅಭಿನ್,ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹೇಶ್ ಕುಮಾರ್, ಸದಸ್ಯರಾದ ಪಳನಿ, ಪೂರ್ಣಿಮಾ ಸೇರಿದಂತೆ ಮತ್ತಿತರರು ಹಾಜರಿದ್ದರು.