20 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ : ಕಾಂಗ್ರೆಸ್ ಪ್ರತಿಭಟನೆ

June 9, 2021

ನವದೆಹಲಿ ಜೂ.9 : ಕಳೆದ ಒಂದು ತಿಂಗಳಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು 20 ಬಾರಿ ಏರಿಕೆ ಮಾಡಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಜೂ.11 ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ಪ್ರಮುಖರು ತಿಳಿಸಿದ್ದಾರೆ. ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರ ಗಡಿ ದಾಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

error: Content is protected !!